ನಾಳೆ ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆಗಳಿಂದ ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಬ್ಬನವರಿಗೆ ಸನ್ಮಾನ
ಶಕ್ತಿ ವಸತಿ ಶಾಲೆಯವರು ನಡೆಸುತ್ತಿರುವ ಅಂತರ್ ಶಾಲಾ ಸ್ಪರ್ಧೆ ಶಕ್ತಿ ಫೆಸ್ಟ್- 2020 ಇದರ ಉದ್ಘಾಟನಾ ಸಮಾರಂಭವು 31 ರ ಪೂರ್ವಾಹ್ನ 10 ಘಂಟೆಗೆ ನೆರವೇರಲಿರುವುದು. ಈ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕಾರವನ್ನು ಪಡೆದಿರುವ ಅಕ್ಷರ ಸಂತ ಹರೇಕಳ ಹಾಜಬ್ಬನವರನ್ನು ಗೌರವಿಸಲಾಗುವುದು.
ಸಮಾರಂಭದಲ್ಲಿ ಖ್ಯಾತ ಭರತನಾಟ್ಯ ಕಲಾವಿದೆ ಶ್ರೀಮತಿ ವಾಣಿರಾಜ ಗೋಪಾಲ್ ಹಾಗೂ ಕುಲಶೇಖರದ ಸೇಕ್ರೆಡ್ ಹಾರ್ಟ್ ಹೈಸ್ಕೂಲ್‌ನ ಮುಖ್ಯ ಶಿಕ್ಷಕಿ ಸಿಸ್ಟರ್ ಮರಿಯಎಸ್. ಎಲ್. ಡಿಸೋಜಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಾರೆ. ಸಮಾರಂಭದ ಅಧ್ಯಕ್ಷತೆಯನ್ನು ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಕೆ. ಸಿ. ನಾೖಕ್ ವಹಿಸಲಿದ್ದಾರೆ ಎಂದು ಶಾಲೆಯ ಪ್ರಾಚಾರ್ಯೆ ಶ್ರೀಮತಿ ವಿದ್ಯಾಕಾಮತ್ ಜಿ. ತಿಳಿಸಿದ್ದಾರೆ.