ಮಂಗಳೂರು ಸೆ. 5: ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯ ರೇಶ್ಮ ಮೆಮೋರಿಯಲ್ ಸಭಾಂಗಣದಲ್ಲಿ ಸೆಪ್ಟಂಬರ್ 5 ಸೋಮವಾರದಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ ಅವರು ಮಾತನಾಡಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಗುರುವಿನ ಪಾತ್ರ ಬಹಳ ದೊಡ್ಡದು ಅವರು ನಮ್ಮ ಜೀವನಕ್ಕೆ ಆಧಾರವಾಗಿರುತ್ತಾರೆ. ಎಲ್ಲ ಶಿಕ್ಷಕರನ್ನು ವಂದಿಸಲು ಈ ದಿನವನ್ನು ರಾಧಾಕೃಷ್ಣನ್ ಅವರ ಹೆಸರಲ್ಲಿ ದೇಶದಾದ್ಯಂತ ಶಿಕ್ಷಕರ ದಿನಾಚರಣೆ ಎಂದು ಆಚರಿಸಲಾಗುತ್ತಿದೆ. ಸುಂದರ ಕಾರ್ಯಕ್ರಮವನ್ನು ನೀಡಿದ ಮಕ್ಕಳೆಲ್ಲರಿಗೂ ಧನ್ಯವಾದಗಳು ಎಂದು ಹೇಳುತ್ತ ಎಲ್ಲ ಮಕ್ಕಳಿಗೆ ಶುಭ ಹಾರೈಸಿದರು.
ವಿದ್ಯಾರ್ಥಿಗಳಿಂದ ಹಾಡು, ನೃತ್ಯಗಳನ್ನೊಳಗೊಂಡ ಮನರಂಜನೆಯ ಕಾರ್ಯಕ್ರಮಗಳು ಜರುಗಿದವು ಮ್ತು ದಿನದ ವಿಶೇಷತೆಯಾಗಿ ಶಿಕ್ಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಕ್ತಿ ವಸತಿ ಶಾಲೆಯ ಪ್ರಧಾನ ಸಲಹೆಗಾರರಾದ ರಮೇಶ್ ಕೆ. ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ, ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪೃಥ್ವಿರಾಜ್, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆಯಾದ ವಿದ್ಯಾ ಕಾಮತ್ ಜಿ ಅವರು ಉಪಸ್ಥಿತರಿದ್ದರು.
ವಿದ್ಯಾರ್ಥಿ ನಿಹಾಸ್ ದಿನದ ಮಹತ್ವವನ್ನು ವಾಚಿಸಿದರೆ, ಹರ್ಷಿತಾ ಮತ್ತು ಅವನೀಷ್ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದಗಳನ್ನು ಸಲ್ಲಿಸಿದರು. ಮಕ್ಕಳೆಲ್ಲರಿಗೂ ಸಿಹಿಯನ್ನು ಹಂಚುವ ಮೂಲಕ ಕಾರ್ಯಕ್ರಮವು ಮುಕ್ತಾಯಗೊಂಡಿತು.