ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಅಗಸ್ಟ್ 13 ರಂದು ’ ವಿಶ್ವ ಸಂಸ್ಕೃತ ದಿನ’ ಆಚರಣೆ ವಿಜ್ರಂಭಣೆಯಿಂದ ನೆರವೇರಿತು. ಸರಸ್ವತಿ ವಂದನೆಯಿಂದ ಆರಂಭವಾದ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಹತ್ತನೇ ತರಗತಿಯಲ್ಲಿ ಸಂಸ್ಕೃತದಲ್ಲಿ ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀನಿವಾಸ ಯುನಿವರ್ಸಿಟಿಯ ಸಂಸ್ಕೃತ ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಡಾ. ಶಾಂತಲಾ ವಿಶ್ವಾಸ್ ಮಾತನಾಡಿ ಸಂಸ್ಕೃತ ಪ್ರಪಂಚದ ಅತ್ಯಂತ ಶ್ರೇಷ್ಠವಾದ ಭಾಷೆ. ಈ ಭಾಷೆಯನ್ನು ಕಲಿಯುವುದರಿಂದ ಶಾರೀರಿಕ ಹಾಗೂ ಮಾನಸಿಕ ದೃಢತೆಯನ್ನು ಸಾಧಿಸಬಹುದು, ಈ ಭಾ?ಯಿಂದ ನಮ್ಮ ಉಚ್ಛಾರಣೆಯಲ್ಲಿ ಸ್ಪಷ್ಟತೆಯನ್ನು ಸಾಧಿಸಬಹುದು ಎಂದು ತಿಳಿಸಿದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಪ್ರಧಾನ ಸಲಹೆಗಾರರಾದ ಶ್ರೀ ರಮೇಶ್ ಕೆ. ಇವರು ಸಂಸ್ಕೃತವನ್ನು ಎಲ್ಲರೂ ಕಲಿಯುವಂತಾಗಬೇಕು ಹಾಗೂ ಅದು ನಮ್ಮೆಲ್ಲರ ಭಾಷೆಯಾಗಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷರಾದ ಸಂಸ್ಥೆಯ ಸಂಸ್ಥಾಪಕರೂ ಹಾಗೂ ಆಡಳಿತಾಧಿಕಾರಿಗಳೂ ಆದ ಡಾ. ಕೆ. ಸಿ. ಶಕ್ತಿ ವಿದ್ಯಾಸಂಸ್ಥೆಯಲ್ಲಿ ಈ ವರ್ಷದಿಂದಲೇ ಎಲ್.ಕೆ.ಜಿ ಯಿಂದ 7 ನೇ ತರಗತಿವರೆಗೆ ಸಂಸ್ಕೃತ ಬೋಧನೆ ಪ್ರಾರಂಭ : ಡಾ. ಕೆ. ಸಿ. ನಾೖಕ್ ಅವರು ಸಂಸ್ಕೃತ ಭಾಷೆ ಎಲ್ಲ ಭಾಷೆಗಳಿಗೆ ತಾಯಿಯ ಸ್ವರೂಪದಲ್ಲಿದೆ. ಶಕ್ತಿ ವಿದ್ಯಾಸಂಸ್ಥೆಯ ಎಲ್ಲ ವಿದ್ಯಾರ್ಥಿಗಳೂ ಸಂಸ್ಕೃತ ಭಾಷೆಯನ್ನು ಕಲಿಯಬೇಕು. ಆಧುನಿಕ ಶಿಕ್ಷಣದ ಜೊತೆಗೆ ನಮ್ಮ ಸಂಸ್ಕೃತಿಯ ಮೂಲವಾದ ಸಂಸ್ಕೃತ ಭಾಷೆಯನ್ನು ನಾವೆಲ್ಲರೂ ಕಲಿಯಬೇಕಾಗಿದೆ. ಆ ಕಾರಣದಿಂದ ನಮ್ಮ ವಿದ್ಯಾಸಂಸ್ಥೆಯಲ್ಲಿ ’ಎಲ್.ಕೆ.ಜಿ’ ಯಿಂದ 7ನೆ ತರಗತಿಯವರೆಗೆ ಸಂಸ್ಕೃತ ಭಾಷಾ ಕಲಿಕೆ ಆರಂಭಿಸಲು ಚಿಂತಿಸಲಾಗಿದೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪೃಥ್ವಿರಾಜ ಹಾಗೂ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ಕಾಮತ್ ಉಪಸ್ಥಿತರಿದ್ದರು. ಪದವಿಪೂರ್ವ ವಿಭಾಗದ ಸಂಸ್ಕೃತ ಉಪನ್ಯಾಸಕ ಶ್ರೀ ರವಿಶಂಕರ ಹೆಗಡೆ ನಿರೂಪಿಸಿದರು. ಶಕ್ತಿ ವಸತಿ ಶಾಲೆಯ ಸಂಸ್ಕೃತ ಶಿಕ್ಷಕಿ ಶ್ರೀಮತಿ ಕೌಶಿಕಿ ಭಟ್ ಸ್ವಾಗತಿಸಿದರು. ಶಿಕ್ಷಕಿ ಶ್ರೀ ಮಾನಸ ಪ್ರಭು ವಂದಿಸಿದರು.