ಮಂಗಳೂರು ಏಪ್ರಿಲ್ 20 : ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆಯಿಂದ ನಾಳೆ (ಜೂನ್ 21) ಬೆಳಗ್ಗೆ 8 ಗಂಟೆಗೆ ಆನ್ಲೈನ್ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ. ಯೋಗ ತರಬೇತಿಯನ್ನು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಯೋಗ ತರಬೇತುದಾರ ಪ್ರವೀಣ್ ನಡೆಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸಂಜೀತ್ ನಾೖಕ್ ಶುಭಹಾರೈಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ಶಾಲೆ ಮತ್ತು ಶಕ್ತಿ ಪಪೂ ಕಾಲೇಜಿನ ವಿದ್ಯಾರ್ಥಿಗಳು, ಪೋಷಕರು, ಅಧ್ಯಾಪಕರು ಮತ್ತು ಸಿಬ್ಬಂದಿಗಳು ಭಾಗವಹಿಸಲಿದ್ದಾರೆ.