ದಿನಾಂಕ 23 ಸೋಮವಾರದಂದು ಮಂಗಳೂರಿನ ಶಕ್ತಿ ವಸತಿ ಶಾಲೆಯ 2022-23 ನೇ ಸಾಲಿನ ಶೈಕ್ಷಣಿಕ ತರಗತಿಗಳನ್ನು ಆರಂಭಿಸಲಾಯಿತು.
8 ರಿಂದ 10 ನೇ ತರಗತಿ ಮಕ್ಕಳಿಗೆ ಹಮ್ಮಿಕೊಳ್ಳಲಾಗಿದ್ದ ಓರಿಯಂಟೇಶನ್ ಕಾರ್ಯಕ್ರಮವು ದೀಪ ಬೆಳಗಿಸುವುದರ ಮೂಲಕ ಆರಂಭವಾಯಿತು.
ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಶ್ರೀಮತಿ ವಿದ್ಯಾ ಕಾಮತ್ ಜಿ ಅವರು ಮಾತನಾಡಿ ಹೊಸತಾಗಿ ದಾಖಲಾದ ಮಕ್ಕಳಿಗೆ ಶಾಲೆಯ ನಿಯಮಾವಳಿಗಳನ್ನು ಮತ್ತು ರೀತಿ-ನೀತಿಗಳನ್ನು ಸವಿವರವಾಗಿ ತಿಳಿಸಿದರು.
ಈ ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗೆ ಕಲಿಕೆಯೊಂದಿಗೆ ವಿವಿಧ ಆಸಕ್ತಿದಾಯಕ ಕ್ರೀಡಾ ತರಬೇತಿಗಳು ನುರಿತ ತರಬೇತುದಾರರಿಂದ ಲಭಿಸುತ್ತವೆ. ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಶಕ್ತಿ ವಸತಿ ಶಾಲೆಯು ಶ್ರಮಿಸುತ್ತಾ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿ ಕಾಣುತ್ತಾ 5 ನೇ ವರ್ಷಕ್ಕೆ ಕಾಲಿಟ್ಟಿದೆ. ವಿದ್ಯಾರ್ಥಿಗಳು ಸಿಕ್ಕ ಎಲ್ಲಾ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಕೀರ್ತಿವಂತರಾಗಲಿ ಎಂದು ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಮತ್ತು ಶೈಕ್ಷಣಿಕ ಸಂಯೋಜಕರಾದ ಪೃಥ್ವಿರಾಜ್ ಆಶಿಸಿದರು.
ನಂತರ ಸಂಸ್ಥೆಯ ಆಡಳಿತಾಧಿಕಾರಿ ಡಾ. ಕೆ.ಸಿ. ನಾೖಕ್ ಮಾತನಾಡಿ ಮಕ್ಕಳನ್ನು ಶೈಕ್ಷಣಿಕ ವರ್ಷಕ್ಕೆ ಸ್ವಾಗತಿಸಿ ಗುರಿ ಸ್ಪಷ್ಟವಾಗಿರಬೇಕು, ಸತತ ಪ್ರಯತ್ನವಿರಬೇಕು ಆಗ ಮಾತ್ರ ಫಲಿತಾಂಶ ಉತ್ತಮವಾಗಿರುತ್ತದೆ ಎಂದು ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಶಕ್ತಿ ವಿದ್ಯಾ ಸಂಸ್ಥೆಯ ಪ್ರಧಾನ ಸಲಹೆಗಾರರಾದ ರಮೇಶ್.ಕೆ, ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ, ಶಿಕ್ಷಕರು – ಶಿಕ್ಷಕೇತರರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಚೈತ್ರ ಭಂಡಾರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.