ಮಂಗಳೂರು : ಶಕ್ತಿ ವಿದ್ಯಾಸಂಸ್ಥೆಯಲ್ಲಿ ಸಾಹಿತ್ಯ ಸಪ್ತಾಹ (Literary week) ದ ಅಂಗವಾಗಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಬುಧವಾರದಂದು ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಒಂದರಿಂದ ಐದನೇ ತರಗತಿಯ ವಿದ್ಯಾರ್ಥಿಗಳು ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳ ಅಭಿನಯ ಗೀತೆಗಳನ್ನು, ಕಥಾಕಥನವನ್ನು ಹಾಗೂ ವಿವಿಧ ಕಾರ್ಯಕ್ರಮವನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದ ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪಠ್ಯೇತರ ಚಟುವಟಿಕೆಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಅತ್ಯಂತ ಅನಿವಾರ್ಯ. 1 ರಿಂದ 5 ನೇ ತರಗತಿಯ ಮಕ್ಕಳು ಹೆಚ್ಚು ಚಟುವಟಿಕೆಗಳ ಮೂಲಕವೇ ವಿಷಯವನ್ನು ಕಲಿಯುತ್ತಾರೆ. ಮಕ್ಕಳನ್ನು ಈ ನಿಟ್ಟಿನಲ್ಲಿ ಪ್ರೋತ್ಸಾಹಿಸುತ್ತಿರುವ ಶಿಕ್ಷಕ – ಶಿಕ್ಷಕಿಯರಿಗೆ, ಶಿಕ್ಷಕೇತರ ಸಿಬ್ಬಂದಿಗಳಿಗೆ ಹಾಗೂ ಪೋಷಕರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ. ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಶಕ್ತಿ ವಿದ್ಯಾಸಂಸ್ಥೆಯ ಆಡಳಿತಮಂಡಳಿ ಸದಾ ಬದ್ಧವಾಗಿದೆ ಎಂದು ನುಡಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ ಕೆ., ಶಕ್ತಿ ವಸತಿ ಶಾಲೆಯ ಪ್ರಾಂಶುಪಲರಾದ ರವಿಶಂಕರ್ ಹೆಗಡೆ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಕನಿಷ್ಕಾ ಸ್ವಾಗತಿಸಿದರು ಹಾಗೂ ವೃಷ್ಟಿ ವಂದಿಸಿದರು. ಸಾನ್ವಿ ಬಂಗೇರ ಕಾರ್ಯಕ್ರಮ ನಿರೂಪಿಸಿದರು.