ಮಂಗಳೂರು : ಮಂಗಳೂರಿನ ತಲಪಾಡಿಯ ದೇವಿನಗರದಲ್ಲಿರುವ ಶಾರದ ವಿದ್ಯಾಲಯದಲ್ಲಿ ವಿದ್ಯಾಭಾರತಿ ಕರ್ನಾಟಕ ಹಾಗೂ ಶಾರದ ಸಮೂಹ ಸಂಸ್ಥೆಗಳು ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಪ್ರಾಂತ ಹಾಗೂ ಕ್ಷೇತ್ರೀಯ ಮಟ್ಟದ ಜ್ಞಾನ ವಿಜ್ಞಾನ ಮೇಳ ಇದೇ ಅಕ್ಟೋಬರ್ ತಿಂಗಳ ದಿನಾಂಕ 15 ರಿಂದ 20 ರ ವರೆಗೆ ಜರಗಿತು.
ಹಲವಾರು ಶಾಲೆಗಳು ಭಾಗವಹಿಸಿದ ಸ್ಪರ್ಧೆಯಲ್ಲಿ ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಗಳಾದ ಶಾಸ್ತಾ ನಾಕ್ ವಿ., 8 ನೇ ತರಗತಿ ವಿಜ್ಞಾನ ಸಂಶೋಧನಾ ವಸ್ತು ಪ್ರದರ್ಶನದಲ್ಲಿ ಜಿಲ್ಲೆ, ರಾಜ್ಯ ಮತ್ತು ಕ್ಷೇತ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು 13 ರಿಂದ 16 ನವೆಂಬರ್ 2024 ರ ಜಯಪುರ ರಾಜಸ್ಥಾನದಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಅಖಿಲ ಭಾರತ ವಿಜ್ಞಾನ ಮೇಳಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ 10 ನೇ ತರಗತಿಯ ಬೀರೇಶ್ ಗೌಡ ಗಣಿತ ಪ್ರಯೋಗದಲ್ಲಿ ಜಿಲ್ಲಾ, ರಾಜ್ಯ ಮತ್ತು ಕ್ಷೇತ್ರಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು 19 ರಿಂದ 22 ನವೆಂಬರ್ 2024 ರ ಒರಿಸ್ಸಾ ಪುರಿಯಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಭಾರತೀಯ ಗಣಿತ ಮೇಳಕ್ಕೆ ಆಯ್ಕೆಯಾಗಿರುತ್ತಾರೆ.
ಈ ಸಂದರ್ಭದಲ್ಲಿ ಕಾಲೇಜಿನ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್, ಕಾರ್ಯದರ್ಶಿ ಶ್ರೀ ಸಂಜಿತ್ ನಾೖಕ್. ಪ್ರಧಾನ ಸಲಹೆಗಾರರಾದ ಶ್ರೀ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿಶಾಲೆಯ ಪ್ರಾಂಶುಪಾಲೆಯಾದ ಬಬಿತಾ ಸೂರಜ್ ಅಭಿನಂದಿಸಿದರು.