Call Us :
+91 96860 00046
CBSE

Shakthi Education Trust

+91 9108043552
info@shakthi.edu.in

ಶಕ್ತಿ ಕ್ಯಾನ್ ಕ್ರಿಯೇಟ್ -2026 ರ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ಕಳೆದ 10 ದಿನಗಳಿಂದ ನಡೆಯುತ್ತಿರುವ ಶಕ್ತಿ ಕ್ಯಾನ್ ಕ್ರಿಯೇಟ್ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಏಪ್ರಿಲ್‌ 11 ರಂದು ನಡೆಯಿತು.

ಈ ಬೇಸಿಗೆ ಶಿಬಿರದಲ್ಲಿ ಮ್ಯಾಜಿಕ್, ಮಡಿಕೆ ತಯಾರಿಕೆ, ಚಲನಚಿತ್ರದ ವಿಕ್ಷಣೆ,ಪೈಜಾಮ ಪಾರ್ಟಿ, ಬೆಂಕಿ ಇಲ್ಲದೆ ಅಡುಗೆ,ಕಥೆ ಹೇಳುವುದು, ಆರೋಗ್ಯ ಮತ್ತು ನೈರ್ಮಲ್ಯ, ವಾಟರ್ ಸ್ಪ್ಲಾಶ್ ಪಾರ್ಟಿ, ತೋಟಗಾರಿಕೆ, ನೃತ್ಯ, ಜುಂಬಾ, ಈಜು, ಆಟೋಟ, ನಾಟಕ, ಗಾಳಿಪಟ ಹಾರಾಟ, ಬಾಟಲ್ ಪೇಂಟಿಂಗ್ ಸೇರಿದಂತೆ ಕಲೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಅನೇಕ ಕಾರ್ಯಕ್ರಮವನ್ನು ಈ 10 ದಿನದಲ್ಲಿ  ಆಯೋಜಿಸಲಾಗಿತ್ತು.ಇದರ ಜೊತೆ ತಣ್ಣಿರುಬಾವಿ ಸಮುದ್ರ ತೀರಕ್ಕೆ ಮಕ್ಕಳ ಭೇಟಿಯು ನಡೆಯಿತು.

 

 

ಈ ಬೇಸಿಗೆ ಶಿಬಿರದಲ್ಲಿ ಸುಮಾರು 100 ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದು ಈ ಸಂದರ್ಭದಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಸಮರೋಪ ಭಾಷಣ ಮಾಡಿದ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ ಕೆ. ರವರು ನಾವು ೭ ವರ್ಷಗಳಿಂದ ಇಂತಹ ಬೇಸಿಗೆ ಶಿಬಿರವನ್ನು ಆಯೋಜನೆ ಮಾಡಿಕೊಂಡು ಬರುತ್ತಿದ್ದೇವೆ. ಈ ಕಾರ್ಯಕ್ರಮವು ಯಶಸ್ವಿಯಾಗಿ ಮೂಡಿಬರಲು ನಮ್ಮ ಸಂಸ್ಥೆಯ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಮಹತ್ತರವಾದ ಶ್ರಮವನ್ನು ವಹಿಸಿರುವುದನ್ನು ಈ ಸಂದರ್ಭದಲ್ಲಿ ಶ್ಲಾಘಿಸಿದರು. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಅನಾವರಣಗೊಳಿಸುವಲ್ಲಿ ಇದೊಂದು ಉತ್ತಮವಾದ ವೇದಿಕೆಯಾಗಿ ಶಕ್ತಿ ಕ್ಯಾನ್ ಕ್ರಿಯೇಟ್ ಮೂಡಿಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಅಧ್ಯಕ್ಷೀಯ ಭಾಷಣವನ್ನು ಮಾಡಿದ ಸಂಸ್ಥೆಯ ಸಂಸ್ಥಾಪಕರಾದ ಡಾ.ಕೆ.ಸಿ. ನಾಕ್‌ರವರು ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳ ಸಕ್ರಿಯ ಚಟುವಟಿಕೆಯನ್ನು ನೋಡಿ ನನಗೆ ತುಂಬಾ ಸಂತೋಷವಾಯಿತು. ಇದರ ಯಶಸ್ಸಿಗೆ ಶ್ರಮಿಸಿದ ಎಲ್ಲ ಶಿಕ್ಷಕರಿಗೂ ಪೊಷಕರಿಗೂ ತುಂಬು ಹೃದಯದ ಧನ್ಯವಾದಗಳು ಎಂದರು.

ಈ ಸಂದರ್ಭದಲ್ಲಿ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಪೋಷಕರು ತಮ್ಮ ಅನಿಸಿಕೆಗಳನ್ನು ಹೇಳುತ್ತಾ ಶಕ್ತಿ ವಿದ್ಯಾಸಂಸ್ಥೆಯ ಬೇಸಿಗೆ ಶಿಬಿರದಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ದಿಗೆ ಸಹಕಾರಿಯಾಗಿದ್ದು ಕೇವಲ ಹತ್ತು ದಿನಗಳು ಮಾತ್ರವಲ್ಲದೆ ಈ ಶಿಬಿರವು ಒಂದು ತಿಂಗಳವರೆಗೆ ನಡೆಯುತ್ತಿದ್ದರೆ ಇನ್ನು ಚೆನ್ನಾಗಿರುತ್ತಿತ್ತು ಎಂದು ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯ ಬ್ರೇಕ್ ಸ್ಟ್ರೋಕ್‌ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದ ಶಕ್ತಿ ವಸತಿ ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿನಿ ಶ್ಲೋಕರಾಮ್ ಅವರನ್ನು ಸನ್ಮಾನಿಸಲಾಯಿತು. ಬಳಿಕ ಬೇಸಿಗೆ ಶಿಬಿರದ ಸಂಯೋಜಕಿಯಾಗಿರುವ ಶ್ರೀಮತಿ ಸುಷ್ಮಾ ಸತೀಶ್‌ರವರು ಶಿಬಿರದ ಚಟುವಟಿಕೆಯ ಸಂಪೂರ್ಣ ವರದಿಯನ್ನು ಮಂಡಿಸಿದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಕ್ಯಾಪ್ಟನ್ ಲಕ್ಮೀಕಾಂತ್  ಕಾಮತ್ ರವರು ಉಪಸ್ಥಿತರಿದ್ದರು.

 ಈ ಸಂದರ್ಭದಲ್ಲಿ ಶಿಬಿರದ ಮಕ್ಕಳಿಂದ ವಿವಿಧ ಮನಸೂರೆಗೊಳ್ಳುವಂತಹ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಶಕ್ತಿ ವಸತಿ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ ಕು.ವೃಷ್ಟಿ ಪಿ.ರವರು ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು.

About School

Residential School

Shakthi Residential School, founded in the year 2015, beginning with...

Vision & Mission

Shakthi is power or energy. The human body, mind and...

Management

Mr. Sanjith Naik  – Managing Trustee, Correspondent & Secretary Sanjith Naik, has...

Teaching Staff

  Mrs. Babitha Suraj Principal MSc, B.Ed 25 Years’ Experience...