ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ. ಬಬಿತಾ ಸೂರಜ್ ಅವರು ವಿದ್ಯಾರ್ಥಿಗಳ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಸಮಗ್ರ ಅಭಿವೃದ್ಧಿಗಾಗಿ ಶಕ್ತಿ ವಸತಿ ಶಾಲೆಯ “ಇಂಡಿಯಾ ಕೆ12 ಸ್ಕೂಲ್ ಅವಾರ್ಡ್” ಎಂಬ ಮಾನ್ಯತೆ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಸ್ವೀಕರಿಸಿದ್ದಾರೆ. ಅವರು ಸೆಪ್ಟೆಂಬರ್ 11 ಮತ್ತು 12 ರಂದು ಬೆಂಗಳೂರಿನಲ್ಲಿ ಎಲ್ಡ್ರಾಕ್ ಸಂಸ್ಥೆ ಆಯೋಜಿಸಿದ ಶೈಕ್ಷಣಿಕ ಸಮ್ಮೇಳನದಲ್ಲಿ ಭಾಗವಹಿಸಿದ್ದರು, ಈ ಸಮ್ಮೇಳನದಲ್ಲಿ ಭಾರತದ ವಿವಿಧೆಡೆಯಿಂದ ನೂರಾರು ಪ್ರಾಂಶುಪಾಲರು, ನಿರ್ದೇಶಕರು ಮತ್ತು ಖ್ಯಾತ ಶಿಕ್ಷಣ ತಜ್ಞರು ಭಾಗವಹಿಸಿದ್ದರು. ಶಿಕ್ಷಣಕ್ಕೆ ಸಂಬಂಧಿಸಿದ ಹಲವು ಪ್ಯಾನಲ್ ಡಿಸ್ಕಷನ್‌ಗಳು ಹಾಗೂ ಶಿಕ್ಷಣ ಮೇಳವನ್ನು ಈ ಪ್ರಶಸ್ತಿ ಸಮ್ಮೇಳನದಲ್ಲಿ ಆಯೋಜಿಸಲಾಗಿತ್ತು.



ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್, ಕಾರ್ಯದರ್ಶಿ ಶ್ರೀ ಸಂಜಿತ್ ನಾೖಕ್. ಪ್ರಧಾನ ಸಲಹೆಗಾರರಾದ ಶ್ರೀ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಹೆಚ್ ಮತ್ತು ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿದರು.

