ಮಂಗಳೂರು ಜುಲೈ 26 : ಮಂಗಳೂರಿನ ಶಕ್ತಿ ನಗರದಲ್ಲಿರುವ ಶಕ್ತಿ ವಸತಿ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶುಕ್ರವಾರದಂದು ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.
ಈ ಸಂಧರ್ಭದಲ್ಲಿ ಶಕ್ತಿ ವಸತಿ ಶಾಲಾ ಪ್ರಾಂಶುಪಾಲೆ ಶ್ರೀಮತಿ ಬಬಿತಾ ಸೂರಜ್ ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು ಕೂಡಿಕೊಂಡು ಪರಮ ವೀರಚಕ್ರ ಪ್ರಶಸ್ತಿ ಪಡೆದ ಸೈನಿಕರ ಭಾವ ಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿದರು.
ಕಾರ್ಗಿಲ್ ವಿಜಯದಲ್ಲಿ ಭಾಗಿಯಾದ ಭಾರತೀಯ ಸೈನಿಕರ ತ್ಯಾಗ ಬಲಿದಾನಗಳ ಕುರಿತಾದ ಸಾಕ್ಷ್ಯ ಚಿತ್ರವನ್ನು ಪ್ರದರ್ಶಿಸಲಾಯಿತು.
ಯುದ್ಧ ಸ್ಮಾರಕ ಕದ್ರಿ ಮಂಗಳೂರು ಇಲ್ಲಿ ನಡೆದ ಕಾರ್ಗಿಲ್ ವಿಜಯ ದಿವಸ ಆಚರಣೆಯಲ್ಲಿ ಶಕ್ತಿ ಪ್ರಾಥಮಿಕ ಶಾಲಾ ಮಕ್ಕಳು ಶಿಕ್ಷಕರೊಂದಿಗೆ ಭಾಗವಹಿಸಿದ್ದು ವಿಶೇ?ವಾಗಿತ್ತು.
ಈ ಸಂದರ್ಭದಲ್ಲಿ ಶಕ್ತಿ ವಸತಿ ಶಾಲಾ ಪ್ರಾಂಶುಪಾಲೆ ಬಬಿತಾ ಸೂರಜ್, ಶಿಕ್ಷಕ ಶಿಕ್ಷಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿನಿ ಭಾವಿಕಾ ದಿನದ ಪ್ರಾಮುಖ್ಯತೆಯನ್ನು ವಾಚಿಸಿದರು. ಹೇಮಿಲಾ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.