ಮಂಗಳೂರು ನ. 18 : ಶಕ್ತಿ ವಸತಿ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿ ವಿವನ್ ಶೆಟ್ಟಿ ಮಧ್ಯಪ್ರದೇಶದ ದೀವಸ್‌ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ.
ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್, ಆಡಳಿತಾಧಿಕಾರಿ ಡಾ. ಕೆ. ಸಿ. ನಾೖಕ್, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ವೆಂಕಟೇಶ್ ಮೂರ್ತಿ ಹೆಚ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲರಾದ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.