Call Us :
+91 96860 00046
CBSE

Shakthi Education Trust

+91 9108043552
info@shakthi.edu.in

ಸ್ವಾಮಿ ವಿವೇಕಾನಂದ ಜಯಂತಿ

ಮಂಗಳೂರು: ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ದಿನಾಂಕ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬೈಕಾಡಿ ಜನಾರ್ದನ ಆಚಾರ್ ಮಾತನಾಡುತ್ತಾ ಸ್ವಾಮಿ ವಿವೇಕಾನಂದರು ಸತ್ಯಾನ್ವೇಷಿಯಾಗಿದ್ದರು ಹಾಗೂ ವೇದಗಳ ಹಿನ್ನಲೆಯಲ್ಲಿ ಸುದೃಢ ಸಮಾಜ ಹಾಗೂ ದೇಶವನ್ನು ಕಟ್ಟಲು ಸಾಧ್ಯ. ವಿದ್ಯಾರ್ಥಿಗಳು ವಿವೇಕಾನಂದರ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ತಮ್ಮ ಪ್ರಖರ ಭಾಷಣಗಳ ಮೂಲಕ ಹಿಂದೂ ಮೌಲ್ಯಗಳತ್ತ ಪಾಶ್ಚಾತ್ಯರ ಗಮನ ಸೆಳೆದ, ಭಾರತದ ಮೇಲೆ ಪಾಶ್ಚಾತ್ಯರಿಗೆ ಗೌರವ ಮೂಡುವಂತೆ ಮಾಡಿದ ಸ್ವಾಮಿ ವಿವೇಕಾನಂದರು ಜಗತ್ತು ಕಂಡ ಶ್ರೇಷ್ಠ ವ್ಯಕ್ತಿಗಳಲ್ಲಿ ಒಬ್ಬರು ಎಂದರು.

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಕೆ.ಸಿ ನಾೖಕ್‌ ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು, ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಅಭಿವೃದ್ಧಿ ಅಧಿಕಾರಿ ಶ್ರೀಮತಿ ನಸೀಮ್ ಬಾನು, ಪ್ರಧಾನ ಸಲಹೆಗಾರ ರಮೇಶ್ ಕೆ. ಉಪಸ್ಥಿತರಿದ್ದರು. ಆರಂಭದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ಕಾಮತ್ ಜಿ. ಸ್ವಾಗತಿಸಿ, ಕೊನೆಯಲ್ಲಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭಾಕರ ಜಿ.ಎಸ್ ವಂದಿಸಿದರು. ರಿಂಕು ಕುಮಾರಿ ಸ್ವಾಮಿ ವಿವೇಕಾನಂದರ ಕುರಿತಾಗಿ ಮಾತನಾಡಿದರು. ಶ್ರೀಮತಿ ಪ್ರಿಯಾಂಕ ರೈ ಕಾರ್ಯಕ್ರಮ ನಿರೂಪಿಸಿದರು.

About School

Residential School

Shakthi Residential School, founded in the year 2015, beginning with...

Vision & Mission

Shakthi is power or energy. The human body, mind and...

Management

Mr. Sanjith Naik  – Managing Trustee, Correspondent & Secretary Sanjith Naik, has...

Teaching Staff

  Mrs. Babitha Suraj Principal MSc, B.Ed 25 Years’ Experience...