Call Us :
+91 96860 00046
CBSE

Shakthi Education Trust

+91 9108043552
info@shakthi.edu.in

ವಿಶ್ವ ಸಂಗೀತ ದಿನಾಚರಣೆ

ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆಯನ್ನು ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಆಚರಿಸಲಾಯಿತು.

ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಎಕ್ಸ್‌ಪರ್ಟ್ ಸಮೂಹ ಸಂಸ್ಥೆಗಳ ಐ. ಟಿ. ನಿರ್ದೇಶಕರಾಗಿರುವ ಅಂಕುಶ್ ಎನ್. ನಾಯಕ್ ಅವರು ದೀಪವನ್ನು ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಮಕ್ಕಳನ್ನುದ್ದೇಶಿಸಿ ಮಾತನಾಡಿದ ಅವರು ಶಕ್ತಿ ಶಾಲೆಯಲ್ಲಿ ಸಂಗೀತ ದಿನಾಚರಣೆಯನ್ನು ಆಚರಿಸುತ್ತಿರುವುದಕ್ಕೆ ಅಭಿನಂದನೆಯನ್ನು ತಿಳಿಸುತ್ತೇನೆ. ದಿನದಲ್ಲಿ ಕನಿಷ್ಠ ಒಂದು ಗಂಟೆಯಾದರೂ ನಾವು ನಮ್ಮ ಹವ್ಯಾಸಗಳಿಗೆ ಮೀಸಲಿಡಬೇಕು, ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯ ಸಂಗೀತ ಕಲಿಯಬೇಕು, ಸಂಗೀತವು ನಮ್ಮಲ್ಲಿ ಕ್ರಿಯಾಶೀಲತೆಯನ್ನು ಹಾಗೂ ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ನಾವು ನಮ್ಮ ಭಾರತೀಯ ಶಾಸ್ತ್ರೀಯ ಸಂಗೀತ ಶೈಲಿಯನ್ನು ಅದರ ಪ್ರಾಮುಖ್ಯತೆಯನ್ನು ಅರಿತು ಗೌರವಿಸಬೇಕು ಎಂದರು. ಭಾರತದ ಅನೇಕ ಯುವ ಸಂಗೀತಕಾರರು ಇಂದು ಭಾರತವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುತ್ತಿದ್ದಾರೆ. ನಮ್ಮ ದೇಶದ ಸಂಗೀತಕ್ಕೆ ಜಗತ್ತಿನಲ್ಲಿ ಮನ್ನನೆಯಿದೆ. ಜಗತ್ತಿನ ಬೇರೆ ಬೇರೆ ದೇಶದಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಅಲಿಸುವ ಜನರು ದೊಡ್ಡ ಪ್ರಮಾಣದಲ್ಲಿ ಸಂಗೀತ ಕಚೇರಿಯನ್ನು ಆಯೋಜಿಸಿದಾಗ ಸೇರುತ್ತಾರೆ. ಆದರೆ ಇಂದು ಭಾರತದಲ್ಲಿ ಆ ಸಂಖ್ಯೆ ಕಡಿಮೆಯಾಗುತ್ತಿರುವುದು ಸ್ವಲ್ಪ ನೋವನ್ನು ಕೊಡುತ್ತಿದೆ. ನಾವು ನಮ್ಮ ಶಾಲಾ ಹಂತದಲ್ಲಿ ಸಮಯವನ್ನು ಹೊಂದಾಣಿಕೆ ಮಾಡಿ ಸಂಗೀತಕ್ಕೆ ಒತ್ತು ಕೊಡಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಬಳಿಕ ವೇದಿಕೆಯಲ್ಲಿದ್ದ ಗಣ್ಯರು ಎಲ್ಲರೂ ಸೇರಿ ಮುಖ್ಯ ಅತಿಥಿಗಳಿಗೆ ಶಾಲು ಹೊದಿಸಿ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಸಂಗೀತ ದಿನಾಚರಣೆಯ ಪ್ರಯುಕ್ತ ಶಕ್ತಿ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ವಿವಿಧ ಸಂಗೀತ ವಾದ್ಯಗಳನ್ನೊಳಗೊಂಡ ಕಾರ್ಯಕ್ರಮವು ನಡೆಯಿತು.

ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿಯಾದ ಡಾ. ಕೆ. ಸಿ. ನಾೖಕ್‌ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶಕ್ತಿ ವಿದ್ಯಾ ಸಂಸ್ಥೆಯ ಮುಖ್ಯ ಸಲಹೆಗಾರರಾಗಿರುವ ಶ್ರೀ ರಮೇಶ್ ಕೆ., ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ಶ್ರೀ ವೆಂಕಟೇಶ್ ಮೂರ್ತಿ ಹಾಗೂ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಶ್ರೀಮತಿ ಬಬಿತಾ ಸೂರಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಶ್ರೀಮತಿ ಬಬಿತಾ ಸೂರಜ್ ಅವರು ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಶಕ್ತಿ ವಸತಿ ಶಾಲೆಯ ಶಿಕ್ಷಕಿ ಶ್ರೀಮತಿ ಅರುಣೀತ ಕಾರ್ಯಕ್ರಮವನ್ನು ನಿರೂಪಿಸಿದರು.

About School

Residential School

Shakthi Residential School, founded in the year 2015, beginning with...

Vision & Mission

Shakthi is power or energy. The human body, mind and...

Management

Mr. Sanjith Naik  – Managing Trustee, Correspondent & Secretary Sanjith Naik, has...

Teaching Staff

  Mrs. Babitha Suraj Principal MSc, B.Ed 25 Years’ Experience...