Call Us :
+91 96860 00046
CBSE

Shakthi Education Trust

+91 9108043552
info@shakthi.edu.in

ಕಾವಿ ಕಲೆಯ ತರಬೇತಿ

ಶಕ್ತಿನಗರದ ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ದಸರಾ ರಜಾ ಶಿಬಿರ, ಶಕ್ತಿ ಕ್ಯಾನ್ ಕ್ರಿಯೇಟ್‌ನಲ್ಲಿ ಶಿಬಿರಾರ್ಥಿಗಳಿಗೆ ಕಾವಿ ಕಲೆಯ ತರಬೇತಿ ನೀಡಲಾಯಿತು. ನೂರಾರು ವರ್ಷಗಳ ಹಿಂದೆ ದೇವಸ್ಥಾನದ ಭಿತ್ತಿಗಳಲ್ಲಿ ಕಾವಿ ಕಲೆಯನ್ನು ಬಳಸುತ್ತಿದ್ದರು. ಈಗಲೂ ಉತ್ತರ ಕರ್ನಾಟಕ ದೇಗುಲಗಳಲ್ಲಿ ನಾವು ಕಾವಿ ಕಲೆಯ ಸೌಂದರ್ಯವನ್ನು ವೀಕ್ಷಿಸಬಹುದು.

ಇಡೀ ದಿನ ನಡೆದ ಕಾರ್ಯಕ್ರಮದಲ್ಲಿ ನಾಡಿನ ಪ್ರಸಿದ್ಧ ಕಲಾವಿದೆ ಶ್ರೀಮತಿ ವೀಣಾ ಶ್ರೀನಿವಾಸ್ ಶಿಬಿರಾರ್ಥಿಗಳಿಗೆ ಮನದಟ್ಟಾಗುವಂತೆ ಕಾವಿ ಕಲೆಯ ತರಬೇತಿಯನ್ನು ನೀಡಿದರು. ಭಾಗವಹಿಸಿದ ವಿದ್ಯಾರ್ಥಿಗಳೆಲ್ಲರೂ ಒಂದೊಂದು ಚಿತ್ರವನ್ನು ಬಿಡಿಸಿ ಸಂಭ್ರಮ ಪಟ್ಟರು. ಸಂಸ್ಥೆಯ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ಕಲಾವಿದರನ್ನು ಪರಿಚಯಿಸಿ ಸ್ವಾಗತಿಸಿದರು. ಮುಖ್ಯ ಸಲಹೆಗಾರ ರಮೇಶ್ ಕೆ ಹಾಗೂ ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ನಸೀಮ್ ಬಾನು ಉಪಸ್ಥಿತರಿದ್ದರು. ಶಕ್ತಿ ಪಿ.ಯು. ಕಾಲೇಜಿನ ಪ್ರಾಚಾರ್ಯ ಪ್ರಭಾಕರ ಜಿ.ಎಸ್ ವಂದಿಸಿದರು.

About School

Residential School

Shakthi Residential School, founded in the year 2015, beginning with...

Vision & Mission

Shakthi is power or energy. The human body, mind and...

Management

Mr. Sanjith Naik  – Managing Trustee, Correspondent & Secretary Sanjith Naik, has...

Teaching Staff

  Mrs. Babitha Suraj Principal MSc, B.Ed 25 Years’ Experience...